ಬಸ್- ಸ್ಕೂಟರ್ ಅಪಘಾತ: ಲೆಕ್ಕಪರಿಶೋಧಕಿ ಸಾವು

Prasthutha|

ಬೆಂಗಳೂರು: ಅತಿ ವೇಗದಿಂದ ಬಂದ ಖಾಸಗಿ ಬಸ್ ನಿಲ್ಲಿಸಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದು ಖಾಸಗಿ ಕಂಪನಿಯ ಲೆಕ್ಕಪರಿಶೋಧಕಿ ಸಾವನ್ನಪ್ಪಿದ ಘಟನೆ ತುಮಕೂರು ರಸ್ತೆಯ ಆರ್ ಎಂಸಿ ಯಾರ್ಡ್ ಬಳಿಯ ಶೆಲ್ ಪೆಟ್ರೋಲ್ ಬಂಕ್ ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ.

- Advertisement -


ಲಗ್ಗೆರೆಯ ವಿನುತಾ(22)ಮೃತಪಟ್ಟವರು ಎಂದು ಗುರುತಿಸಲಾಗಿದೆ.


ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿನುತಾ ಬೆಳಿಗ್ಗೆ 9 ರ ವೇಳೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಆರ್ ಎಂಸಿ ಯಾರ್ಡ್ ಬಳಿಯ ಶೆಲ್ ಪೆಟ್ರೋಲ್ ಬಂಕ್ ಮೊಬೈಲ್ ರಿಂಗ್ ಆಗಿದೆ. ತಕ್ಷಣವೇ ಆಕೆ ಸ್ಕೂಟರ್ ನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಫೋನ್ ಕರೆಯನ್ನು ಸ್ವೀಕರಿಸಿದ್ದಾಳೆ.

- Advertisement -


ಅಷ್ಟರಲ್ಲಿ ಅತಿ ವೇಗದಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಆಕೆ ಹೆಲ್ಮೆಟ್ ತೆಗೆದು ಮಾತನಾಡುತ್ತಿದ್ದರಿಂದ ಕೆಳಗೆ ಬಿದ್ದಾಗ ಆಕೆಯ ತಲೆಯ ಮೇಲೆ ಬಸ್ ಚಕ್ರ ಹರಿದು ಗಂಭೀರ ಗಾಯವಾಗಿದೆ.
ಯುವತಿ ರಕ್ತದ ಮಡುವಿನಲ್ಲಿ ನರಳಾಡುತ್ತಾ ಬಿದ್ದಿದ್ದರೂ ಸ್ಥಳೀಯರು ಮೊಬೈಲ್ ವೀಡಿಯೋ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದರು.


ಯಾರೊಬ್ಬರೂ ಆಕೆಯನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿರಲಿಲ್ಲ. ಬಳಿಕ ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಆಗಮಿಸಿದ್ದು, ಅಂಬುಲೆನ್ಸ್ ವ್ಯವಸ್ಥೆ ಮಾಡುವಷ್ಟರಲ್ಲಿ ಯುವತಿಯ ಪ್ರಾಣಪಕ್ಷಿ ಹಾರಿಹೋಗಿದೆ. ಅತಿ ವೇಗದಿಂದ ಬಂದ ಬಸ್ ಚಾಲಕ ಬಸ್ ಅನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದು ಪ್ರಕರಣ ದಾಖಲಿಸಿರುವ ಯಶವಂತಪುರ ಪೊಲೀಸರು ಬಸ್ ಚಾಲಕನ ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ.

Join Whatsapp