ಬೆಂಗಳೂರು: ಹುಮನಾಬಾದ ಮತಕ್ಷೇತ್ರದ ನಮದಾಪೂರು ವಾಡಿ ಗ್ರಾಮಕ್ಕೆ ಸುಮಾರು 10 ವರ್ಷಗಳಿಂದ ಯಾವುದೇ ಬಸ್ ಸಂಚಾರ ಇಲ್ಲದೇ ಸಂಚಾರಕ್ಕೆ ತೊಂದರೆಯಾಗಿರುವ ಮಾಹಿತಿ ಕೇಳಿದ ಕೂಡಲೇ ಸ್ಪಂದಿಸಿ ಈ ಗ್ರಾಮಕ್ಕೆ ಬಸ್ ಸಂಚಾರವಾಗುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಈ ಗ್ರಾಮಕ್ಕೆ ಬಸ್ ಸಂಚಾರಿ ಇಲ್ಲದೇ ಸಾರ್ವಜನಿಕರಿಗೆ, ಅದರಲ್ಲೂ ವಿದ್ಯಾರ್ಥಿಗಳಿಗೆ, ಆರೋಗ್ಯ ತಪಾಸಣೆಗೆ ಹೋಗುವವರಿಗೆ, ಮಹಿಳೆಯರಿಗೆ ತುಂಬ ತೊಂದರೆಯಾಗುತ್ತಿದೆ ಎನ್ನುವ ವಿಷಯವನ್ನು ಕಾರ್ಯಕರ್ತರೊರ್ವರಿಂದ ತಿಳಿದು ಮನ ಕಲಕಿತು. ಕೂಡಲೇ ಈ ಗ್ರಾಮಕ್ಕೆ ಬಸ್ ಸಂಚರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾವು ಸೂಚಿಸಿದ ಹಿನ್ನೆಲೆಯಲ್ಲಿ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮಸ್ಥರು ಬಸ್ ಅನ್ನು ಶೃಂಗರಿಸಿ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.