ರಾಯಚೂರು: ಇಲ್ಲಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬುಶ್ರಾ ಮತೀನ್ 16 ಚಿನ್ನದ ಪದಕ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.
ರಾಯಚೂರಿನ ಎಸ್ ಎಲ್ ಎನ್ ಕಾಲೇಜು ಬಿಇ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಬುಶ್ರಾ ಮತೀನ್ ಜಹೀರುದ್ದೀನ್ ಎನ್ನುವವರ ಪುತ್ರಿಯಾಗಿದ್ದಾರೆ.
ಇವರು ಸಿವಿಲ್ ಇಂಜಿನಿಯರಿಂಗ್ ನ ಎಲ್ಲಾ 8 ಸೆಮಿಸ್ಟರ್ ಗಳಲ್ಲಿ ರಾಜ್ಯಕ್ಕೆ ಮೊದಲ ರಾಂಕ್ ಪಡೆದಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ವಿವಿಧ ವಿಷಯಗಳಲ್ಲಿ ಒಟ್ಟು 16 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.
ಬುಶ್ರಾ ಮತೀನ್ ಅವರು ತನ್ನ ಸಾಧನೆಗೆ ಕಾಲೇಜಿನ ಉಪನ್ಯಾಸಕರು, ಆಡಳಿತ ಮಂಡಳಿ, ಪೋಷಕರು ಹಾಗೂ ಸ್ನೇಹಿತರಿಗೆ ಧನ್ಯವಾದ ಹೇಳಿದ್ದು, ಮುಂದೆ ತಾನು ಯುಪಿಎಸ್ಸಿ ಎಕ್ಸಾಂ ಪಾಸ್ ಮಾಡುವ ಗುರಿ ಹೊಂದಿದ್ದೇನೆ ಎಂದು ಹೇಳಿದರು.