ನಿಜಾಮಾಬಾದ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ನಗರದ ಹೋಟೆಲ್ ವೊಂದರಲ್ಲಿ ನಡೆದಿದೆ.
ಆದಿಲಾಬಾದ್ ಮೂಲದ ಕೊತಕೋಟಾ ಸೂರ್ಯಪ್ರಕಾಶ್, ಅವರ ಪತ್ನಿ ಪ್ರತ್ಯೂಷಾ ಹಾಗೂ ಇಬ್ಬರು ಮಕ್ಕಳು ಮೃತಪಟ್ಟರು ಎಂದು ತಿಳಿದು ಬಂದಿದೆ.
ಸೂರ್ಯಪ್ರಕಾಶ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ನ ರೂಮ್ ನಲ್ಲಿ ಡೆತ್ನೋಟ್ ಸಿಕ್ಕಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.