ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

Prasthutha|

ಮಂಗಳೂರು: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.


ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯಾಗಿದ್ದಾರೆ.

- Advertisement -


ಚಂದ್ರಶೇಖರ ಅವರು ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯ ಮೇಲಿಂದ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ತೇಲುತ್ತರಿರುವ ಬಲೂನ್ ನೋಡಿ ಅನುಮಾನಿಸಿದ ಸ್ಥಳೀಯರು ನದಿಗೆ ಹಾರಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದ್ದು, ಅದನ್ನು ಹೊರತಂದಿದ್ದಾರೆ. ಉದ್ಯಮಿ ಚಂದ್ರಶೇಖರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.

- Advertisement -