ಉದ್ಯಮಿಗೆ ವಂಚನೆ ಪ್ರಕರಣ: ಹಾಲಶ್ರೀಗೆ ಜಾಮೀನು ನಿರಾಕರಣೆ

Prasthutha|

ಬೆಂಗಳೂರು: ವಂಚನೆ ಪ್ರಕರಣದ ಆರೋಪಿಯಾದ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ನಗರದ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

- Advertisement -


ಈ ಸಂಬಂಧ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಟಿ. ಗೋವಿಂದಯ್ಯ ಸೋಮವಾರ ಪ್ರಕಟಿಸಿದ್ದಾರೆ..