ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯ ಹತ್ಯೆ

Prasthutha|

ದೆಹಲಿ: ಕೊಲೆಯತ್ನ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಉದ್ಯಮಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಈಶಾನ್ಯ ದೆಹಲಿಯ ಭಜನ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉದ್ಯಮಿ ಜೈಲಿನಿಂದ ಹೊರಬರುತ್ತಿದ್ದಂತೆ 3-4 ಯುವಕರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

- Advertisement -


ಟೂರ್ ಮತ್ತು ಟ್ರಾವೆಲ್ ವ್ಯವಹಾರವನ್ನು ಹೊಂದಿದ್ದ ಮತ್ತು ಜಿಮ್ ತರಬೇತುದಾರರಾಗಿದ್ದ ಸುಮಿತ್ ಅವರ ಮುಖ, ಕುತ್ತಿಗೆ, ಎದೆ ಮತ್ತು ಹೊಟ್ಟೆಯ ಮೇಲೆ 17 ಇರಿತದ ಗಾಯಗಳಾಗಿವೆ. ಹಲ್ಲೆ ಬಳಿಕ ಸಮಿತ್ ಅವರನ್ನು ಜೆಪಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಕೊಲೆ ಯತ್ನ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಆತನಿಗೆ ಇತ್ತೀಚೆಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.



Join Whatsapp