ಬೆಂಗಳೂರು; ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಸಂಜೆ ಮುಕ್ತಾಯಗೊಂಡಿದೆ.ಹಾನಗಲ್‌ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್, ಪಕ್ಷದ ಮುಖಂಡರೊಂದಿಗೆ ತಹಸೀಲ್ದಾರರ ಕಚೇರಿಗೆ ತೆರಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರ ಮುಖಂಡರು ರೋಡ್ ಶೋ ನಡೆಸಿದರು
ಸಿಂಧಗಿ ತಾಲ್ಲೂಕು ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರು ತಮ್ಮ ಉಮೇದುವಾರಿಕೆ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ವಿ. ಸೋಮಣ್ಣ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು. ಸಿಂಧಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ತಮ್ಮ ಬೆಂಬಲಿಗರೊಂದಿಗೆ ತಹಸೀಲ್ದಾರರ ಕಚೇರಿಗೆ ತೆರಳಿ, ನಾಮಪತ್ರ ಸಲ್ಲಿಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇನ್ನಿತರ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು, ಇದೇ ತಿಂಗಳ 13ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನ. 30ರಂದು ಮತದಾನ ನಡೆಯಲಿದೆ.