ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ.

- Advertisement -

ನಾಮಪತ್ರಗಳ ಪರಿಶೀಲನೆ ಜುಲೈ 3ರಂದು ನಡೆಯಲಿದ್ದು, ನಾಮಪತ್ರ ವಾಪಸ್‌ಗೆ ಜುಲೈ 5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ ಜುಲೈ 12ರಂದು ಬೆಳಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ 5ರ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಜೂ.14,2028ರ ವರೆಗೆ ಅವಧಿ

- Advertisement -

ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. 2028ರ ಜೂ.14 ರವರೆಗೆ ಈ ಚುನಾವಣೆಯಲ್ಲಿ ಆಯ್ಕೆಯಾಗುವ ಸದಸ್ಯರ ಅವಧಿ ಇದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡು ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅವರು ಪರಾಭವಗೊಂಡಿದ್ದರು. ಬಳಿಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.



Join Whatsapp