ಮಮತಾ ಬ್ಯಾನರ್ಜಿ ಕ್ಷೇತ್ರ ಸೇರಿದಂತೆ ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ಘೋಷಿಸಿದ ಚುನಾವಣಾ ಆಯೋಗ

Prasthutha|

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರ ಪಶ್ಚಿಮ ಬಂಗಾಳದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಘೋಷಿಸಿದೆ. ಸೆಪ್ಟೆಂಬರ್ 30 ರಂದು ಮಮತಾ ಬ್ಯಾನರ್ಜಿ ಅವರ ಕ್ಷೇತ್ರವಾದ ಭಬಾನಿಪುರ ಸೇರಿದಂತೆ 3 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಹೇಳಲಾಗಿದೆ.

- Advertisement -

ಬಂಗಾಳದ ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧೆ ನಡೆಸಿ ಸೋತ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗದ ಈ ತೀರ್ಮಾನ ಅಲ್ಪ ಸಮಾಧಾನ ತಂದಿದೆ.

ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯುವ ನಿಟ್ಟಿನಲ್ಲಿ ಈ ಉಪ ಚುನಾವಣೆಯು ಮಹತ್ವ ಪಡೆದಿದ್ದು, ಗೆಲ್ಲಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಕಳೆದ ಚುನಾವಣೆಯಲ್ಲಿ ಮಮತಾ ಅವರು ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.

- Advertisement -

ಕಳೆದ ವಿಧಾನಸಭಾ ಚುನಾವಣೆಯ ಪಲಿತಾಂಶ ನಂತರ ತನ್ನ ಸ್ವ ಕ್ಷೇತ್ರವಾದ ಭಬಾನಿಪುರಕ್ಕೆ ಶೋಭಂದೇಬ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳದಲ್ಲಿ ಖಾಲಿಯಾದ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯನ್ನು ನಡೆಸುವಂತೆ ಕೋರಿ ಶುಕ್ರವಾರ ಕಲ್ಕತ್ತಾ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.



Join Whatsapp