ಬೆಂಗಳೂರು: ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ ಚುನಾವಣಾಧಿಕಾರಿಗಳು ಹೇಳಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. ಸಂಸದರಾಗುವ ಮೊದರು ಜಗದೀಶ್ ಶೆಟ್ಟರ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಾಂಗ್ರೆಸ್ ಪಕ್ಷ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷ ಸೇರಿ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದಾರೆ. ಈಗ ಸಂಸದರು ಕೂಡ ಆಗಿದ್ದಾರೆ. ಅವರು ತೆರವುಗೊಳಿಸಿದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ.