ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ.ಬೈರತಿ ಬಸವರಾಜ ಅವರಿಗೆ ಹೆಚ್ಚುವರಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಹೊಣೆಯನ್ನು ನೀಡಲಾಗಿದೆ.
ಈಗಾಗಲೇ ಬಸವರಾಜ ಅವರು ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರಿಗೆ ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಹೊಣೆಯನ್ನು ವಹಿಸಲಾಗಿದೆ.
ಶೇಕಡಾ 40 ಕಮಿಷನ್ ಆರೋಪದಲ್ಲಿ ಸಚಿವ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಜೀನಾಮೆ ನೀಡಿದ್ದರಿಂದ ಚಿಕ್ಕಮಗಳೂರು ಉಸ್ತುವಾರಿ ಖಾಲಿ ಇತ್ತು.