ಮಾಜಿ ಸಿಎಂ ಯಡಿಯೂರಪ್ಪ ಗೆ ಗೌರವ ಡಾಕ್ಟರೇಟ್

Prasthutha|

- Advertisement -

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇನ್ನು ಮುಂದೆ ಡಾ. ಯಡಿಯೂರಪ್ಪ ಆಗಲಿದ್ದಾರೆ.

ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವತಿಯಿಂದ ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ

- Advertisement -

ಶುಕ್ರವಾರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ



Join Whatsapp