ಸಿ.ಎಂ . ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

Prasthutha|

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಯೋಧ್ಯೆ ಕ್ಷೇತ್ರದಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ಒಳ್ಳೆದು. ಆದಿತ್ಯನಾಥ್ ಅವರು ಇಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಬೇಕಾಗುತ್ತಿತ್ತು ಎಂದು ಇಲ್ಲಿನ ರಾಮ ಮಂದಿರದ ಪ್ರಧಾನ ಅರ್ಚಕರು ಸೋಮವಾರ ಹೇಳಿದ್ದಾರೆ.

- Advertisement -

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಂದಾಗಿ ಇಲ್ಲಿನ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ. ಇದರಿಂದ ಆದಿತ್ಯನಾಥ್ ಅವರು ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಗೋರಖ್‌ಪುರದಿಂದ ಸ್ಪರ್ಧಿಸಬೇಕು ಎಂದು ನಾನು ಈ ಹಿಂದೆ ಸಲಹೆ ನೀಡಿದ್ದೆ” ಎಂದು ತಾತ್ಕಾಲಿಕ ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಕಣಕ್ಕೆ ಇಳಿಯುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿತ್ತು. ಆದರೆ ಬಿಜೆಪಿ ನಾಯಕತ್ವವು ಅವರನ್ನು ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ.



Join Whatsapp