Home ಟಾಪ್ ಸುದ್ದಿಗಳು ವಿಪಕ್ಷ ನಾಯಕ ಸ್ಥಾನ ನೀಡುವಂತೆ ಸಿದ್ದರಾಮಯ್ಯಗೆ ಸಿ.ಎಂ. ಇಬ್ರಾಹಿಂ ಮನವಿ

ವಿಪಕ್ಷ ನಾಯಕ ಸ್ಥಾನ ನೀಡುವಂತೆ ಸಿದ್ದರಾಮಯ್ಯಗೆ ಸಿ.ಎಂ. ಇಬ್ರಾಹಿಂ ಮನವಿ

ಬೆಂಗಳೂರು:  ಪರಿಷತ್ ವಿಪಕ್ಷ ನಾಯಕನ ಸ್ಥಾನ ನೀಡುವಂತೆ ಸಿ.ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಇಂದು ಭೇಟಿಯಾಗಿ ಮನವಿ ಮಾಡಿದ್ದಾರೆ.

ಈ ಹಿಂದೆ ಸಿ.ಎಂ. ಇಬ್ರಾಹಿಂ, ತನಗೆ ವಿಪಕ್ಷ ನಾಯಕನ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಬಳಿ ಬೇಡಿಕೆ ಇಟ್ಟಿದ್ದರು. ಆದರೆ, ಪಕ್ಷ ನಾಯಕ ಸ್ಥಾನ ನೀಡದಕ್ಕೆ ಕಾಂಗ್ರೆಸ್ ಪಕ್ಷ ಬಿಡುವ ಬಗ್ಗೆಯೂ ಚಿಂತಿಸಿದ್ದರು. ಸದ್ಯ ಈಗ ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.  

ಇನ್ನೊಂದೆಡೆ ಇಬ್ರಾಹಿಂಗೆ ವಿಪಕ್ಷ ಸ್ಥಾನ ನೀಡಲು ಮೂಲ ಕಾಂಗ್ರೆಸ್ಸಿಗರ ಆಕ್ಷೇಪವಿದೆ. ವಿಧಾನ ಸಭೆ ಮತ್ತು ವಿಧಾನ ಪರಿಷತ್ ಎರಡೂ ಸ್ಥಾನ ಜನತಾ ಪರಿವಾರದ ಮೂಲದವರಿಗೆ ನೀಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಈ ಹಿನ್ನಲೆಯಲ್ಲಿ ಇಬ್ರಾಹಿಂಗೆ ಪರಿಷತ್ ವಿಪಕ್ಷ ನಾಯಕನ ಸ್ಥಾನ ನೀಡಬೇಡಿ ಎಂದು ಮೂಲ ಕಾಂಗ್ರೆಸ್ಸಿಗರು ನಿರಾಕರಿಸುತ್ತಿದ್ದಾರೆ.

Join Whatsapp
Exit mobile version