ನವದೆಹಲಿ: ಲೋಕಸಭೆ ಚುನಾವಣೆಗೆ ತಿಂಗಳು ಬಾಕಿ ಇರುವಾಗ ಸಿಎಎ ಜಾರಿ ಮಾಡುವ ಮೂಲಕ ಬಿಜೆಪಿ ರಾಜಕೀಯ ಧ್ರುವೀಕರಣಕ್ಕೆ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ.
ನಾವು ಯುವಕರು, ರೈತರು, ಮಹಿಳೆಯರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮೋದಿ ಅವರ ಬಳಿ ಯಾವ ವಿಷಯವಿದೆ? ಬಿಜೆಪಿ ಬಳಿ ಯಾವ ವಿಷಯವಿದೆ? ಮೋದಿ 10 ವರ್ಷಗಳಲ್ಲಿ ದೇಶಕ್ಕೆ ಆದ ಅನ್ಯಾಯದ ಬಗ್ಗೆ ಮಾತನಾಡಿಲ್ಲ. ಸಿಎಎ ಜಾರಿ ಮಾಡಲು 4 ವರ್ಷ 3 ತಿಂಗಳು ಬೇಕಾಯಿತೇ? ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗ ಜನರಿಗೆ ಧ್ರುವೀಕರಣದ ಡೋಸ್ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.