CAA: ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ವೆಬ್ ಪೋರ್ಟಲ್ ಪ್ರಾರಂಭಿಸಿದ ಗೃಹ ಸಚಿವಾಲಯ

Prasthutha|

ನವದೆಹಲಿ: ‘ಪೌರತ್ವ ತಿದ್ದುಪಡಿ ಕಾಯ್ದೆ’ ಗೆ ಸಂಬಂಧಿಸಿದಂತೆ ಭಾರತದ ಪೌರತ್ವ ಪಡೆಯುವ ಅರ್ಹತೆಯನ್ನು ಹೊಂದಿರುವ ಜನರಿಗಾಗಿ ಕೇಂದ್ರ ಗೃಹ ಸಚಿವಾಲಯವು ಪ್ರತ್ಯೇಕ ವೆಬ್ ಪೋರ್ಟಲ್ ಆರಂಭಿಸಿದೆ.

- Advertisement -


ಪೌರತ್ವ ತಿದ್ದುಪಡಿ ಕಾಯ್ದೆ 2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಕೇಂದ್ರವು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ವೆಬ್ ಪೋರ್ಟಲ್ ಆರಂಭಿಸಲಾಗಿದೆ.
ಪೌರತ್ವ ಕೋರುವ ಅರ್ಜಿಗಳನ್ನು ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ಸಲ್ಲಿಸಬೇಕಿದೆ. ಈ ಪೋರ್ಟಲ್ ಅಲ್ಲದೆ, ‘CAA-2019’ ಎಂಬ ಮೊಬೈಲ್ ಆ್ಯಪ್ ಅನ್ನೂ ಕೂಡಾ ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. 



Join Whatsapp