ನವದೆಹಲಿ: ‘ಪೌರತ್ವ ತಿದ್ದುಪಡಿ ಕಾಯ್ದೆ’ ಗೆ ಸಂಬಂಧಿಸಿದಂತೆ ಭಾರತದ ಪೌರತ್ವ ಪಡೆಯುವ ಅರ್ಹತೆಯನ್ನು ಹೊಂದಿರುವ ಜನರಿಗಾಗಿ ಕೇಂದ್ರ ಗೃಹ ಸಚಿವಾಲಯವು ಪ್ರತ್ಯೇಕ ವೆಬ್ ಪೋರ್ಟಲ್ ಆರಂಭಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ 2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಕೇಂದ್ರವು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ವೆಬ್ ಪೋರ್ಟಲ್ ಆರಂಭಿಸಲಾಗಿದೆ.
ಪೌರತ್ವ ಕೋರುವ ಅರ್ಜಿಗಳನ್ನು ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ಸಲ್ಲಿಸಬೇಕಿದೆ. ಈ ಪೋರ್ಟಲ್ ಅಲ್ಲದೆ, ‘CAA-2019’ ಎಂಬ ಮೊಬೈಲ್ ಆ್ಯಪ್ ಅನ್ನೂ ಕೂಡಾ ಕೇಂದ್ರ ಸರಕಾರ ಬಿಡುಗಡೆ ಮಾಡಿದೆ.