CAA ಈ ನೆಲದ ಕಾನೂನು, ಅದರ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

Prasthutha|

ಕೋಲ್ಕತ್ತ: ಸಿಎಎ ಈ ನೆಲದ ಕಾನೂನು, ಅದರ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -

ನಗರದಲ್ಲಿ ನಡೆದ ರಾಜ್ಯ ಬಿಜೆಪಿಯ ಸಾಮಾಜಿಕ ಮಾಧ್ಯಮ ಮತ್ತು ಐಟಿ ವಿಭಾಗದ ಆಂತರಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಿಎಎ ಜಾರಿಗೊಳಿಸುವುದು ತಮ್ಮ ಪಕ್ಷದ ಬದ್ಧತೆಯ ವಿಚಾರ ಎಂದಿದ್ದಾರೆ.

ಇದೇ ವೇಳೆ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ರಾಜ್ಯದ 35ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



Join Whatsapp