CAA ಪ್ರತಿಭಟನಾಕಾರ ಅಖಿಲ್ ಗೊಗೋಯಿ ಜೈಲಿನಿಂದಲೇ ಅಸ್ಸಾಂ ವಿಧಾನಸಭೆಯ ಅಭ್ಯರ್ಥಿಯಾಗಿ ಸ್ಪರ್ಧೆ !

Prasthutha: March 6, 2021

ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಮತ್ತು CAA ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿ ಬಂಧಿತನಾಗಿರುವ ಅಖಿಲ್ ಗೊಗೋಯಿ ಅವರು ಮುಂಬರುವ ಅಸ್ಸಾಂ ಚುನಾವಣೆಯಲ್ಲಿ ಸಿಬ್ಸಾಗರ್ ನಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿಗಳು ಹೊರಬಿದ್ದಿದೆ. ರೈಜೋಳ್ ದಳದ ಕಾರ್ಯಾಧ್ಯಕ್ಷ ಭಾಸ್ಕೊ ಡಿ ಸೈಕಿಯಾ, ಅವರು ಮೊದಲ ಹಂತದಲ್ಲಿ ತಮ್ಮ ಪಕ್ಷದಿಂದ 17 ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಮತ್ತು ಪಕ್ಷದ ಅಧ್ಯಕ್ಷ ಅಖಿಲ್ ಗುಗೋಯ್ ಸಿಬ್ಸಾಗರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.
“ಮತಗಳನ್ನು ವಿಭಜಿಸದಿರುವ ಉದ್ದೇಶದಿಂದ ನಾವು ಕೇವಲ 17 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಆದ್ದರಿಂದ ಬಿಜೆಪಿ ಸೋಲುತ್ತದೆ ಮತ್ತು ರಾಜ್ಯದಲ್ಲಿ ಸಿಎಎ ವಿರೋಧಿ ಸರ್ಕಾರವಿದೆ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಭಾಸ್ಕೊ ಸೈಕಿಯಾ ಮಾಧ್ಯಮಗಳೊಂದಿಗೆ ಹೇಳಿದ್ದಾರೆ.

2019 ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಖಿಲ್ ಗೊಗೊಯ್ ವಿರುದ್ಧ ಕಠಿಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!