ಮಂಗಳೂರು ಮಾ 12: ಕೇಂದ್ರಸರ್ಕಾರ ವಿವಾದಿತ CAA ಕಾನೂನನ್ನು ಜಾರಿಗೊಳಿಸಿದ್ದನ್ನು ವಿರೋಧಿಸಿ ಮತ್ತು ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ (ಎಸ್‌ಡಿಪಿಐ) ಇಂದು ಸಾಯಂಕಾಲ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು SDPI ಜಿಲ್ಲಾ ಮಾಧ್ಯಮ ಸಂಯೋಜಕರಾದ ಬಶೀರ್ ಬೊಳ್ಳಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕೇಂದ್ರ ಸರಕಾರ ಕೂಡಲೇ ಈ ಕಾನೂನನ್ನು ವಾಪಸು ಪಡೆಯಬೇಕು ಮತ್ತು 90% ಶೇಕಡಾ ಮುಸ್ಲಿಮರು ಮತ ನೀಡಿ ರಚನೆಯಾದ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರ ಈ ರಾಜ್ಯದಲ್ಲಿ ಈ ಕಾಯ್ದೆಯನ್ನು ತಿರಸ್ಕರಿಸಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಸಾಯಂಕಾಲ ಪಕ್ಷದ ಗ್ರಾಮ, ವಾರ್ಡ್, ಬ್ಲಾಕ್ ಮಟ್ಟದಲ್ಲಿ ಭಿತ್ತಿಪತ್ರ ಪ್ರದರ್ಶನ, ಪಂಜಿನ ಮೆರವಣಿಗೆ, ಕ್ಯಾಂಡಲ್ ಮಾರ್ಚ್, ಘೋಷಣೆ ಸೇರಿದಂತೆ ಇನ್ನಿತರ ರೀತಿಯಲ್ಲಿ ಪ್ರತಿಭಟನೆಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.