ಸಿಎಎ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್

Prasthutha|

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ಸ್ವೀಕಾರಾರ್ಹವಲ್ಲ, ತಮಿಳುನಾಡಿನಲ್ಲಿ ಅದನ್ನು ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ  ದಳಪತಿ ವಿಜಯ್ ಹೇಳಿದ್ದಾರೆ.

- Advertisement -

ಈ ಕುರಿತು ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸರ್ಕಾರವು ಸಿಎಎ ಜಾರಿ ಮಾಡಿದ ಬಳಿಕ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಜಯ್ ಸಿಎಎ ಜಾರಿಯನ್ನು ಒಪ್ಪಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ 2019ರಂತಹ ಯಾವುದೇ ಕಾನೂನನ್ನು ದೇಶದಲ್ಲಿ ಸಹಿಸಲು ಸಾಧ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬಾಳುತ್ತಿರುವಾಗ ಇಂತಹ ಕಾನೂನಿನ ಅಗತ್ಯ ಏನಿದೆ ಎಂದಿದ್ದಾರೆ.

ಈ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸದಂತೆ ತಮಿಳುನಾಡು ಸರ್ಕಾರಕ್ಕೆ ವಿಜಯ್ ಮನವಿ ಮಾಡಿದರು.



Join Whatsapp