7 ದಿನಗಳಲ್ಲಿ ಭಾರತದಾದ್ಯಂತ CAA ಜಾರಿ: ಕೇಂದ್ರ ಸಚಿವ ಶಾಂತನು ಠಾಕೂರ್

Prasthutha|

ಕೊಲ್ಕತ್ತಾ: ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಂಸದ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ. ಮುಂದಿನ ಏಳು ದಿನಗಳಲ್ಲಿ ದೇಶಾದ್ಯಂತ ಸಿಎಎ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎ ಒಂದು ವಾರದೊಳಗೆ ಜಾರಿಗೆ ಬರಲಿದೆ ಎಂದಿದ್ದಾರೆ.



Join Whatsapp