ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭಾ ಚುನಾವಣೆಗೆ ಮುನ್ನ ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದರು.