ಸಿಎಎ ನಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

Prasthutha|

ತಿರುವನಂತಪುರಂ: ತಮ್ಮ ಸರ್ಕಾರ ಸಿಎಎ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

- Advertisement -


ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ವಿವಾದಿತ ಸಿಎಎ ನಿಯಮಾವಳಿಗಳನ್ನು ಘೋಷಿಸಿ ಈ ಕಾನೂನಿನ ಜಾರಿಗೆ ಮುಂದಾಗಿರುವ ಕ್ರಮವು ಜನರ ಕೋಮುಭಾವನೆಗಳನ್ನು ಕೆರಳಿಸುವ ಉದ್ದೇಶ ಹೊಂದಿದೆ ಹಾಗೂ ಸಂವಿಧಾನದ ಮೂಲ ತತ್ವಗಳ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರದ ಈ ಕ್ರಮ ದೇಶದಲ್ಲಿ ಸಮಸ್ಯೆ ಸೃಷ್ಟಿಸಬಹುದು. ವಿಪಕ್ಷಗಳು ಒಗ್ಗಟ್ಟಿನಿಂದ ಕೇಂದ್ರದ ಕ್ರಮವನ್ನು ವಿರೋಧಿಸಬೇಕು ಎಂದು ಹೇಳಿದ್ದಾರೆ.

Join Whatsapp