ಬೆಂಗಳೂರು ಯುವತಿ ಮೇಲೆ ಅತ್ಯಾಚಾರ ಆರೋಪ: ಕ್ಯಾಬ್ ಚಾಲಕ ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಬ್ ಚಾಲಕನನ್ನು ದೇವರಾಜ್ ಎಂದು ಗುರುತಿಸಲಾಗಿದ್ದು, ಈತ ಆಂಧ್ರ ಮೂಲದವನು ಎಂದು ಹೇಳಲಾಗಿದೆ.

- Advertisement -

ಈ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಇಬ್ಬರ ನಡುವೆ ಮಾತುಕತೆ ನಡೆದಿದೆ. ಬಳಿಕ ಯುವತಿ ಈತನನ್ನ ತಳ್ಳಿ ಹೊರಟಿದ್ದಾಳೆ. ಮೊಬೈಲ್ ನಲ್ಲಿ ಕ್ಯಾಬ್ ರೇಟ್ ತೋರಿಸಿದ್ದಾರೆ. ಆ ಬಳಿಕ ಮೊಬೈಲ್ ಕಿತ್ತುಕೊಂಡು ಯುವತಿ ಹೋಗಿದ್ದಾರೆ. ಕ್ಯಾಬ್ ಹಣವನ್ನ ಯುವತಿಯಿಂದ ಚಾಲಕ ಪಡೆದಿಲ್ಲ. ಯುವತಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಾರೆ. ಆ ಬಳಿಕ ಇಬ್ಬರ ನಡುವೆ ಏನಾಗಿದೆ ಗೊತ್ತಿಲ್ಲ. ಚಾಲಕ ರೇಪ್ ಮಾಡಿಲ್ಲ ಅಂತಿದ್ದಾನೆ. ವಿಚಾರಣೆ ನಡೆಯುತ್ತಿದೆ. ಸತ್ಯಾಂಶ ಪರಿಶೀಲನೆ ನಡೆಸುತ್ತಿದ್ದೇವೆ. ಘಟನೆ ಸಂಬಂಧ ಇನ್ನೂ ಎಫ್‍ ಐಆರ್ ದಾಖಲಾಗಿಲ್ಲ. ವಿಚಾರಣೆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಿಳಿಸಿದ್ದಾರೆ. ಸದ್ಯ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕ್ಯಾಬ್ ಚಾಲಕನನ್ನು ಡಿಸಿಪಿ ಶರಣಪ್ಪ ವಿಚಾರಣೆ ನಡೆಸುತ್ತಿದ್ದಾರೆ.


ನಿನ್ನೆ ರಾತ್ರಿ ಕ್ಯಾಬ್ ನಲ್ಲಿ ಬಂದ ಪಾನಮತ್ತ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕ್ಯಾಬ್ ಚಾಲಕ ಅತ್ಯಾಚಾರ ನಡೆಸಿದ್ದಾನೆ. ಕೆಲಸ ಮುಗಿಸಿ ಮನೆಗೆ ಹೋಗಲು ಯುವತಿಯು ಕ್ಯಾಬ್ ಹತ್ತಿದ ವೇಳೆ ಈ ಹೀನ ಕೃತ್ಯವೆಸಗಲಾಗಿದೆ ಎಂದು ಯುವತಿ ಪೊಲೀಸರ ಮುಂದೆ ಹೇಳಿದ್ದಳು.



Join Whatsapp