ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ 75ರಷ್ಟು ಉದ್ಯೋಗ ಮೀಸಲಾತಿ: ಮಸೂದೆಗೆ ಸಂಪುಟ ಅನುಮೋದನೆ

Prasthutha|

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ. 75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಕಚೇರಿಯ ಎಕ್ಸ್ ಪ್ರಕಟಣೆ ಬುಧವಾರ ತಿಳಿಸಿದೆ.

- Advertisement -


ರಾಜ್ಯದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಸಲುವಾಗಿ, ಕರ್ನಾಟಕ ಸಚಿವ ಸಂಪುಟವು ಕೈಗಾರಿಕೆಗಳ ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ರಾಜ್ಯ ಉದ್ಯೋಗದ ಕರಡು ಮಸೂದೆಯನ್ನು ಅನುಮೋದಿಸಿದೆ. ಇದು ಕನ್ನಡಿಗರಿಗೆ ನಿರ್ವಹಣಾ ಉದ್ಯೋಗಗಳಲ್ಲಿ 50% ಮತ್ತು ನಿರ್ವಹಣೇತರ ಉದ್ಯೋಗಗಳಲ್ಲಿ 75% ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಈ ಮಸೂದೆಯು ಐಟಿ ಕ್ಷೇತ್ರ ಸೇರಿದಂತೆ ಸಂಪೂರ್ಣ ಖಾಸಗಿ ವಲಯಗಳನ್ನು ಒಳಗೊಳ್ಳುತ್ತದೆ ಮತ್ತು ಪ್ರಸ್ತುತ ವಿಧಾನಸಭೆ ಅಧಿವೇಶನದಲ್ಲಿ ಇದನ್ನು ಮಂಡಿಸಲಾಗುತ್ತದೆ.

ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರ ಜೊತೆ ಹಂಚಿಕೊಳ್ಳಲು ಖುಷಿಯಾಗುತ್ತಿದೆ. ಈ ಮಸೂದೆ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -



Join Whatsapp
Exit mobile version