Home ಟಾಪ್ ಸುದ್ದಿಗಳು ವಿವಾದಿತ ಕೃಷಿ ಕಾಯ್ದೆ ವಾಪಸ್| ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿವಾದಿತ ಕೃಷಿ ಕಾಯ್ದೆ ವಾಪಸ್| ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಹೊಸದಿಲ್ಲಿ: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕಾಗಿ ರೂಪಿಸಲಾಗಿರುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಕೆಲವೇ ದಿನಗಳಲ್ಲಿ ‘ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021’ಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಮಸೂದೆಯನ್ನು ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಅಧಿವೇಶನ ನವೆಂಬರ್ 29ರಂದು ಆರಂಭವಾಗಲಿದೆ.

ರೈತರ ದೀರ್ಘಕಾಲದ ಪ್ರತಿಭಟನೆಯ ಬಳಿಕ ನವೆಂಬರ್ 19ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿಯವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

Join Whatsapp
Exit mobile version