ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಚಿವ ಸಂಪುಟ ತೀರ್ಮಾನ: ಎಚ್.ಕೆ.ಪಾಟೀಲ್

Prasthutha|

ಬೆಂಗಳೂರು : ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

- Advertisement -


ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡವು ಕೇವಲ ದೂರಸಂವೇದಿ ದತ್ತಾಂಶದ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಪ್ರದೇಶವನ್ನು ನಿಗದಿಗೊಳಿಸಿದೆ ಎಂದು ಹೇಳಿದರು.


ಕೇಂದ್ರ ಸರಕಾರವು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಪ್ರಸಕ್ತ ಸಾಲಿನ ಜು.31ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳು ಮತ್ತು ಸಲಹೆಗಳು ಇದ್ದಲ್ಲಿ 60 ದಿನಗಳೊಳಗೆ ಸಲ್ಲಿಸಲು ತಿಳಿಸಿತ್ತು. ಕಸ್ತೂರಿ ರಂಗನ್ ವರದಿಯನ್ವಯ ಪರಿಸರ ಸೂಕ್ಷ್ಮ ಪ್ರದೇಶವನ್ನಾಗಿ 20,668 ಚ.ಕಿಮೀ ಪ್ರದೇಶವನ್ನು ಗುರುತಿಸಿದ್ದು, ವಾಸ್ತವ ಲೋಪಗಳ ತಿದ್ದುಪಡಿ ಮಾಡಿದಾಗ ಪರಿಸರ ಸೂಕ್ಷ್ಮ ಪ್ರದೇಶವು 19,252.70 ಚ.ಕೀ.ಮೀ ಆಗುತ್ತದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.



Join Whatsapp