ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ, ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಹಕ್ಕು ಕಾಯ್ದೆಯ ಹಿಂದಿನ ತಿದ್ದುಪಡಿ ವಾಪಸ್ ಪಡೆದು, ಜುಲೈ 3ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಿಲ್ ಮಂಡನೆ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇವೇಳೆ, ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಇಟ್ಟುಕೊಂಡ ಉದ್ದೇಶ ಸಾಬೀತಾಗಿಲ್ಲ. ಬೆಲೆ ಸಿಗಬೇಕೆಂದು ಬಯಸಿದ್ದರು ಬೆಲೆ ಸಿಗಲಿಲ್ಲ. ಲಕ್ಷಾಂತರ ಕುಟುಂಬ ಕಹಿ ಅನುಭವ, ಹಾನಿ ಅನುಭವಿಸಿದ್ದಾರೆ. ಮಾರುಕಟ್ಟೆಯಲ್ಲಿ ವ್ಯಾಪಾರ ಗಣನೀಯವಾಗಿ ಕಡಿಮೆಯಾಗಿದೆ ಹೀಗಾಗಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.