Home ಟಾಪ್ ಸುದ್ದಿಗಳು ಸಂಪುಟ ವಿಸ್ತರಣೆ: ಸುಳಿವು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ

ಸಂಪುಟ ವಿಸ್ತರಣೆ: ಸುಳಿವು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಪಕ್ಷದ ವರಿಷ್ಠರು ಯಾವಾಗ ಸೂಚನೆ ನೀಡುತ್ತಾರೋ ಆಗ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು, ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನನಗೆ ಮಾಹಿತಿ ಇಲ್ಲ. ಎಲ್ಲವೂ ವರಿಷ್ಠರು ತೆಗೆದುಕೊಳ್ಳುವ ನಿರ್ಣಯದ ಮೇಲೆ ಅವಲಂಬಿತವಾಗಿದೆ ಎಂದರು.ದೆಹಲಿಗೆ ಬರುವಂತೆ ಈವರೆಗೂ ನನಗೆ ಹೈಕಮಾಂಡ್‍ನಿಂದ ಸೂಚನೆ ಬಂದಿಲ್ಲ. ಅವರು ಯಾವಾಗ ಕರೆಯುತ್ತಾರೋ ಆ ವೇಳೆ ನಾನು ದೆಹಲಿಗೆ ಹೋಗಿ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ವರದಿ ನೀಡುವೆ. ಸಂಪುಟ ವಿಸ್ತರಣೆ ಮಾಡಬೇಕೆಂದು ಸೂಚಿಸಿದರೂ ನನ್ನ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯಕ್ಕೆ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಶಾಸಕರು ಇವುಗಳನ್ನು ಭರ್ತಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಂಪುಟ ರಚನೆಯಾಗಬೇಕು ಎಂದು ಹೇಳುವುದು ತಪ್ಪಲ್ಲ. ಅದು ಶಾಸಕರ ಹಕ್ಕು ಕೂಡ ಎಂದು ಅಭಿಪ್ರಾಯಪಟ್ಟರು.

Join Whatsapp
Exit mobile version