ರಾಜ್ಯ ಸರ್ಕಾರದಿಂದ ಕ್ಯಾಬಿನೆಟ್ ದುರುಪಯೋಗ: ಜಗದೀಶ್ ಶೆಟ್ಟರ್

Prasthutha|

ಬೆಳಗಾವಿ: ‘ಅಲ್ಪಸಂಖ್ಯಾತರ ಮತ ಗಟ್ಟಿಗೊಳಿಸುವ ಸಲುವಾಗಿ ಕಾಂಗ್ರೆಸ್ ಸರ್ಕಾರವು ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಹಿಂದಕ್ಕೆ ಪಡೆಯುವ ನಿರ್ಣಯ ಕೈಗೊಂಡು, ಕಾನೂನುಬಾಹಿರ ಕೆಲಸ ಮಾಡಿದೆ. ಕ್ಯಾಬಿನೆಟ್ ದುರುಪಯೋಗ ಪಡಿಸಿಕೊಂಡಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.

- Advertisement -


ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇದು ದಂಗೆ ಪ್ರಕರಣ. ಹಲವರು ಪೊಲೀಸ್ ಠಾಣೆ, ಮನೆಗಳ ಮೇಲೆ ದಾಳಿ ಮಾಡಿದ್ದರು. ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಯಾಗಿತ್ತು. ಆದರೆ, ಪೊಲೀಸರ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿತ್ತು. ಗಂಭೀರವಾದ ಈ ಪ್ರಕರಣ ಹಿಂದಕ್ಕೆ ಪಡೆಯುವ ಕುರಿತಾಗಿ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ವಾಪಸ್ ಪಡೆಯದಿದ್ದರೆ, ಬಿಜೆಪಿಯಿಂದ ಉಗ್ರಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.


‘ಗೃಹ ಇಲಾಖೆ ಮೂಲಕ ಸಿದ್ದರಾಮಯ್ಯ ಈ ವಿಷಯವನ್ನು ಸಂಪುಟದ ಗಮನಕ್ಕೆ ತಂದಿದ್ದಾರೆ. ಆ ಕಡತದಲ್ಲಿರುವ ವಿಚಾರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.



Join Whatsapp