Home ಟಾಪ್ ಸುದ್ದಿಗಳು ಮುಡಾ ಅಕ್ರಮ ಆರೋಪ | ರಾಜ್ಯಪಾಲರ ನೋಟಿಸ್ ಗೆ ಸಂಪುಟ ಸಭೆ ಆಕ್ಷೇಪ: ವಾಪಸ್ ಪಡೆಯುವಂತೆ...

ಮುಡಾ ಅಕ್ರಮ ಆರೋಪ | ರಾಜ್ಯಪಾಲರ ನೋಟಿಸ್ ಗೆ ಸಂಪುಟ ಸಭೆ ಆಕ್ಷೇಪ: ವಾಪಸ್ ಪಡೆಯುವಂತೆ ನಿರ್ಣಯ ಅಂಗೀಕಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಕ್ಕೆ ಗುರುವಾರ ಸಚಿವ ಸಂಪುಟ ಸಭೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.


ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ ಮತ್ತು ನೋಟಿಸ್ ವಿರುದ್ಧ ಕಾನೂನು ಹೋರಾಟ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.


ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರಿ ಸಚಿವ ಕೆಎನ್ ರಾಜಣ್ಣ ಅವರು, ಸಿಎಂಗೆ ಶೋಕಾಸ್ ನೋಟಿಸ್ ನೀಡಿರುವ ಬಗ್ಗೆ ಚರ್ಚಿಸಲಾಗಿದೆ. ನೋಟಿಸ್ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಮತ್ತು ರಾಜ್ಯಪಾಲರಿಗೆ ನೋಟಿಸ್ ವಾಪಸ್ ಪಡೆಯುವಂತೆ ಕೋರಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

Join Whatsapp
Exit mobile version