Home ಟಾಪ್ ಸುದ್ದಿಗಳು ಕೆಫೆ ಸ್ಫೋಟ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ: ಪರಮೇಶ್ವರ್

ಕೆಫೆ ಸ್ಫೋಟ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ: ಪರಮೇಶ್ವರ್

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಪ್ರಕರಣ ಭೇದಿಸುವ ಭರವಸೆ ಮೂಡಿಸಿವೆ ಎಂದು ತಿಳಿಸಿದ್ದಾರೆ.


ನಮ್ಮ ಅಧಿಕಾರಿಗಳು ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version