Home ಟಾಪ್ ಸುದ್ದಿಗಳು ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳಿರುವ ಬ್ರೂಕ್ ಫೀಲ್ಡ್ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.


ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಬ್ರೂಕ್ ಫೀಲ್ಡ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇನ್ನು ಎರಡು ದಿನದಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತನಿಖೆಯಲ್ಲಿ ಏಕೆ, ಯಾರು ಮಾಡಿದ್ದಾರೆ ಎಂದು ಗೊತ್ತಾಗಲಿದೆ. ಕುಕ್ಕರ್ ಸ್ಫೋಟ ಪ್ರಕರಣ, ಈ ಕೇಸ್ಗೂ ಸಾಮ್ಯತೆ ಇದೆಯಾ ಎಂದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.


ಆಸ್ಪತ್ರೆಯ ಎಲ್ಲಾ ಖರ್ಚು ಸರ್ಕಾರ ನೋಡಿಕೊಳ್ಳುತ್ತೆ. ಗಾಯಾಳುಗಳ ಆಸ್ಫತ್ರೆ ವೆಚ್ಚ ಸರ್ಕಾರ ಭರಿಸಲು ನಿರ್ಧಾರ ಮಾಡಿದೆ. ಬೆಸ್ಟ್ ಟ್ರೀಟ್ಮೆಂಟ್ ಕೊಡೋದಕ್ಕೆ ಹೇಳಿದ್ದೀನಿ. ಗಾಯಾಳುಗಳಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಸ್ವರ್ಣಾಂಬ ಎಂಬುವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

Join Whatsapp
Exit mobile version