ಅಕ್ರಮ ಭೂ ಕಬಳಿಕೆ| ಸೌರವ್ ಗಂಗೂಲಿ ಮತ್ತು ಬಂಗಾಳ ಸರ್ಕಾರಕ್ಕೆ ದಂಡ ವಿಧಿಸಿದ ಹೈಕೋರ್ಟ್

Prasthutha|

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಬಂಗಾಳ ಸರ್ಕಾರಕ್ಕೆ ಕೋಲ್ಕತ್ತಾ ಹೈಕೋರ್ಟ್ ದಂಡ ವಿಧಿಸಿದೆ.

- Advertisement -

ನ್ಯೂಟೌನ್ ಪ್ರದೇಶದಲ್ಲಿ ಗಂಗೂಲಿಗೆ ಶಾಲೆ ನಿರ್ಮಿಸಲು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮ(WBHIDCO) ಕಾನೂನುಬಾಹಿರವಾಗಿ ಭೂಮಿಯನ್ನು ಮಂಜೂರು ಮಾಡಿದೆ ಎಂದು ಈ ತೀರ್ಪು ನೀಡಲಾಗಿದೆ.

ಸೌರವ್ ಗಂಗೂಲಿ ಅವರಿಗೆ 10,000ರೂ., ಬಂಗಾಳ ಸರ್ಕಾರ ಮತ್ತು ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ತಲಾ 500,000 ರೂ. ದಂಡ ವಿಧಿಸಿದೆ.

- Advertisement -

ಈ ಮೊತ್ತವನ್ನು ಪಶ್ಚಿಮ ಬಂಗಾಳ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನಾಲ್ಕು ವಾರಗಳಲ್ಲಿ ಜಮಾ ಮಾಡಬೇಕು ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ಜ. ಅರ್ಜಿತ್ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ ಆದೇಶ ನೀಡಿದೆ.

ತಪ್ಪಿತಸ್ಥ ಅಧಿಕಾರಿಗಳಿಂದ ಮೊತ್ತವನ್ನು ವಸೂಲಿ ಮಾಡುವಂತೆ ಸರ್ಕಾರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಭೂಮಿಯನ್ನು ಹಿಂತಿರುಗಿಸಲಾಗಿದ್ದರೂ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.



Join Whatsapp