Home ಟಾಪ್ ಸುದ್ದಿಗಳು ರಜೆಯಲ್ಲಿರುವ ಸಿಬ್ಬಂದಿಯನ್ನು ವಾಪಸ್‌ ಕರೆಸಿ: ಅಮಿತ್‌ ಶಾ

ರಜೆಯಲ್ಲಿರುವ ಸಿಬ್ಬಂದಿಯನ್ನು ವಾಪಸ್‌ ಕರೆಸಿ: ಅಮಿತ್‌ ಶಾ

0

ನವದೆಹಲಿ: ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ.

ಈ ನಡುವೆ ಗೃಹ ಸಚಿವ ಅಮಿತ್‌ ಶಾ ಅವರು ಅರೆಸೈನಿಕ ಪಡೆಗಳ ಮುಖ್ಯಸ್ಥರಿಗೆ ರಜೆಯಲ್ಲಿರುವ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಅಮಿತ್ ಶಾ ಅವರು, ಗಡಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ನಾಗರಿಕರ ಆಶ್ರಯಕ್ಕಾಗಿ ಬಂಕರ್‌ಗಳನ್ನು ಸಿದ್ಧವಾಗಿಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶಾ ಅವರು ಸೂಚಿಸಿರುವುದಾಗಿ ಮೂಲಗಳು ಹೇಳಿವೆ. ರಜೆಯಲ್ಲಿರುವ ಎಲ್ಲಾ ಸಿಬ್ಬಂದಿಯನ್ನು ವಾಪಸ್‌ ಕರೆಸಿಕೊಳ್ಳುವಂತೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮುಖ್ಯಸ್ಥರಿಗೆ ಶಾ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version