ಬೆಂಗಳೂರು: ರಾಜ್ಯ ಸರ್ಕಾರದ ದುರಾಡಳಿತ ಹಾಗೂ ತಾರತಮ್ಯ ಧೋರಣೆಯ ವಿರುದ್ಧ ಪ್ರತಿಭಟಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಚಾಂದ್ ಸಲ್ಮಾನ್ ಸೇರಿದಂತೆ ಕೊಪ್ಪಳ ಜಿಲ್ಲೆಯ ಕಾರ್ಯಕರ್ತರ ಬಂಧನವನ್ನು ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ.
ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರವು ಒಂದು ವರ್ಷದಿಂದ ದ್ವೇಷದ, ತಾರತಮ್ಯದ ಆಡಳಿತ ನಡೆಸುತ್ತಿದ್ದು ಇದನ್ನು ವಿರೋಧಿಸಿ ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಬಂಧಿಸಿ, ಹಿಂಸಿಸಿ ಜೈಲಿಗಟ್ಟಿದ ಕೊಪ್ಪಳ ಪೊಲೀಸರ ಕ್ರಮವನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆಯನ್ನು ನೀಡಿದ್ದು, ರಾಜ್ಯ ಸರ್ಕಾರದ ಈ ದ್ವೇಷ ಆಡಳಿತವನ್ನು ಬೀದಿ ಬೀದಿಗಳಲ್ಲಿ ವಿದ್ಯಾರ್ಥಿ ಸಮೂಹ ಇನ್ನೂ ಕೂಡ ಗಟ್ಟಿ ಧ್ವನಿಯಲ್ಲಿ ಪ್ರಶ್ನಿಸಲಿದ್ದಾರೆಯೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.