ಅರ್ಚಕನಿಂದ ಬಾಲಕಿಯ ಮೇಲೆ ಅತ್ಯಾಚಾರ: ಕ್ಯಾಂಪಸ್ ಫ್ರಂಟ್ ಖಂಡನೆ
Prasthutha: November 26, 2020

ಬೆಂಗಳೂರು: ಮುಸ್ಲಿಂ ಬಾಲಕಿಯೋರ್ವಳ ಮೇಲೆ ಅರ್ಚಕನೋರ್ವ ನಡೆಸಿದ ಅತ್ಯಾಚಾರವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಮುಹಮ್ಮದ್ ಝುಬೇರ್ ತೀವ್ರವಾಗಿ ಖಂಡಿಸಿದ್ದಾರೆ. ಘಟನೆಯನ್ನು ಕಥುವಾ ಮಾದರಿಯೆಂದು ಬಣ್ಣಿಸಿದ್ದಾರೆ.
“ದೇವನಹಳ್ಳಿಯಲ್ಲಿ ದೇವಸ್ಥಾನದ ಅರ್ಚಕನೋರ್ವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಅತ್ಯಂತ ಖಂಡನೀಯ. ಇದು ಮತ್ತೆ ಕಥುವಾದ ಪ್ರಕರಣವನ್ನು ನೆನಪಿಸಿದೆ. ಯುಪಿಯ ಹಥ್ರಾಸ್, ಬಹ್ರಾನ್ ಪುರ್, ಬಿಹಾರದ ಗುಲ್ನಾಝ್ ಮೇಲೆ ನಡೆದಂತಹ ಘಟನೆಗಳು ಈಗ ರಾಜ್ಯ ರಾಜಧಾನಿಯಲ್ಲೂ ನಡೆಯುತ್ತಿರುವುದು ದುರದೃಷ್ಟಕರ. ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಆರೋಪಿಯ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು. ಸರಕಾರ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟವನ್ನು ಮಾಡಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ.
