ಮಂಗಳೂರು: ಜಿಲ್ಲೆಯ ಅತಿಥಿ ಉಪನ್ಯಾಸಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ನಿಯೋಗವು ದ.ಕ ಜಿಲ್ಲಾ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 750 ಅತಿಥಿ ಶಿಕ್ಷಕರು ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇವರಿಗೆ ಕಳೆದ ನಾಲ್ಕು ತಿಂಗಳಿನಿಂದ ಸರ್ಕಾರ ಗೌರವಧನ ನೀಡದೆ ಸತಾಯಿಸುತ್ತಿದೆ. ಇದರಿಂದಾಗಿ ದಿನ ನಿತ್ಯ ಶಾಲೆಗಳಿಗೆ ಬರಲೂ ಕೂಡ ಖರ್ಚಿಗೆ ದುಡ್ಡಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಕನಿಷ್ಠ ವೇತನವೂ ಇಲ್ಲ, ಇನ್ನೊಂದು ಕಡೆ ಉದ್ಯೋಗದ ಭದ್ರತೆಯು ಇಲ್ಲದಾಗಿದೆ. ನಗು ಮುಖದಿಂದ ಮಕ್ಕಳಿಗೆ ಶಿಕ್ಷಣ ನೀಡುವ ನಮ್ಮ ನೋವುಗಳನ್ನು ಕೇಳಲು ಯಾರು ಇಲ್ಲ ಎಂದು ಅತಿಥಿ ಶಿಕ್ಷಕ ಸಂಘದ ಅಧ್ಯಕ್ಷೆಯಾದ ಚಂದ್ರಿಕಾ ಅಳಲನ್ನು ತೋಡಿಕೊಂಡರು.
ಸಮಸ್ಯೆಗಳ ಪರಿಹಾರಕ್ಕೆ ಬೇಕಾಗಿ ನಡೆಸುವ ಎಲ್ಲಾ ನ್ಯಾಯಯುತ ಹೋರಾಟಕ್ಕೆ ಕ್ಯಾಂಪಸ್ ಫ್ರಂಟ್ ಸಂಪೂರ್ಣ ಬೆಂಬಲವಿದೆಯೆಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಇದೇ ಸಂದರ್ಭದಲ್ಲಿ ಹೇಳಿದರು.
ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ನಾಯಕರಾದ ಅಫೀಝ್, ಶಾಹಿಕ್, ಮರ್ಝುಕ್ ಇದ್ದರು.