ಶಿರವಸ್ತ್ರ ನೆಪವೊಡ್ಡಿ ಪದವಿ ವಿದ್ಯಾರ್ಥಿಗಳ ಪರೀಕ್ಷೆಗೆ ಅಡ್ಡಿ: ಮಂಗಳೂರು ವಿವಿ ಉಪ ಕುಲಪತಿಯನ್ನು ಭೇಟಿಯಾದ ಕ್ಯಾಂಪಸ್ ಫ್ರಂಟ್ ನಿಯೋಗ

Prasthutha|

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಕೆಲವೊಂದು ಕಾಲೇಜುಗಳಲ್ಲಿ ಶಿರವಸ್ತ್ರ ನೆಪವನ್ನೊಡ್ಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ತಡೆಯೊಡ್ಡುತ್ತಿದ್ದು, ಈ ವಿಚಾರವಾಗಿ ಮಂಗಳೂರು ವಿವಿ ಉಪ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರನ್ನು ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು.

- Advertisement -

ಶಿರವಸ್ತ್ರ ಸಂಬಂಧ ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಬರಲಿದೆ. ಈ ಮಧ್ಯೆ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪರೀಕ್ಷೆಗಳು ಆರಂಭಗೊಂಡಿವೆ. ಆದರೆ ಕೆಲವೊಂದು ಕಾಲೇಜುಗಳಲ್ಲಿ ಶಿರವಸ್ತ್ರ ತೆಗೆದಿರಿಸಿ ಪರೀಕ್ಷೆ ಬರೆಯುವಂತೆ ಬಲವಂತಪಡಿಸಲಾಗುತ್ತಿದ್ದು, ಇನ್ನು ಕೆಲವೆಡೆ ಪರೀಕ್ಷೆಗೆ ತಡೆಯೊಡ್ಡಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ನಿಯೋಗ ಉಪಕುಲಪತಿಗೆ ಮನವಿ ಮಾಡಿತು.

ಮನವಿ ಸ್ವೀಕರಿಸಿದ ಉಪಕುಲಪತಿಯವರು ಶೀಘ್ರವೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

- Advertisement -

ಈ ಸಂದರ್ಭ ಪರೀಕ್ಷಾಂಗ ಕುಲಸಚಿವ ಪಿ.ಎಲ್ ಧರ್ಮ ಉಪಸ್ಥಿತರಿದ್ದರು. ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾ ನಾಯಕ ರಿಯಾಝ್ ಅಂಕತ್ತಡ್ಕ, ಮಂಗಳೂರು ವಿವಿ ವಿದ್ಯಾರ್ಥಿ ನಾಯಕ ಅಶಾಮ್ ಇದ್ದರು.



Join Whatsapp