ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಯ ಅಮಾನತಿನ ಕುರಿತು ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಆಗ್ರಹ

Prasthutha|

ಉಡುಪಿ :  ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಕೆ ಮಂಜುಳ ಅವರನ್ನು ಏಪ್ರಿಲ್ 7 ರಂದು ಕರ್ತವ್ಯದಲ್ಲಿ ನಿರ್ಲಕ್ಷ್ಯದ ಕಾರಣದಿಂದ ಅಮಾನತು ಮಾಡಲಾಗಿದೆ. ತದನಂತರ ಕೆ ಮಂಜುಳ ಅವರು ತಮ್ಮ ಅಮಾನತಿನ ಕುರಿತು ಪ್ರತಿಕ್ರಿಯಿಸಿ, ಇದು ತನ್ನ ವಿರುದ್ಧದ ದ್ವೇಷದಿಂದ ಮಾಡಿರುವ ಪಿತೂರಿ ಎಂದು ಆರೋಪಿಸಿದ್ದಾರೆ. ತಾನು ಎಲ್ಲಾ ಕೆಲಸ ಕಾರ್ಯಗಳನ್ನು ಬದ್ಧತೆ ಮತ್ತು ಶ್ರದ್ಧೆಯಿಂದ ಮಾಡುತ್ತಿದ್ದರೂ, ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ಮಾತ್ರವಲ್ಲ, ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಇಲಾಖೆಯ ಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಜಿಲ್ಲೆಯ ಜನರಿಗೆ ಆಘಾತಕಾರಿಯಾಗಿದೆ. ಉಡುಪಿ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಹೆಸರು ವಾಸಿಯಾದ ಜಿಲ್ಲೆ.  ವಿದ್ಯಾರ್ಥಿಯ ಭವಿಷ್ಯ ರೂಪಿಸುವಂತಹ ಇಲಾಖೆಗಳಲ್ಲಿ ಇಂತಹ ಆರೋಪಗಳು ಕೇಳಿ ಬಂದರೆ ಜನರಿಗೆ ಭೀತಿ ಉಂಟಾಗುತ್ತದೆ. ಶಿಕ್ಷಣದ ಕುರಿತಾದಂತಹ ಬೇಜವಾಬ್ದಾರಿತನ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಹಲವಾರು ಆಯಾಮಗಳಿಂದ ತನಿಖಾಧಿಕಾರಿಗಳು ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಗಳನ್ನು ಬಯಲು ಮಾಡಬೇಕು. ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಮತ್ತು ಅಮಾಯಕರಿಗೆ ನ್ಯಾಯ ದೊರಕಿಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Join Whatsapp