Home ಕರಾವಳಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅತಿಥಿ ಶಿಕ್ಷಕರ ಧರಣಿಯಲ್ಲಿ ಕ್ಯಾಂಪಸ್ ಫ್ರಂಟ್ ಭಾಗಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅತಿಥಿ ಶಿಕ್ಷಕರ ಧರಣಿಯಲ್ಲಿ ಕ್ಯಾಂಪಸ್ ಫ್ರಂಟ್ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 900 ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಕಳೆದ 4 ತಿಂಗಳಿನಿಂದ ಗೌರವಧನ ಬಿಡುಗಡೆಯಾಗಲಿಲ್ಲ ಮತ್ತು ಉದ್ಯೋಗದ ಭದ್ರತೆ ಇಲ್ಲ ಮುಂತಾದ ಸಮಸ್ಯೆಯನ್ನು ಇಟ್ಟುಕೊಂಡು ಇಂದು ಅತಿಥಿ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ ಅವರ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಯಿತು.

ಅತಿಥಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಕ್ಯಾಂಪಸ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾ ನಿಯೋಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅತಿಥಿ ಶಿಕ್ಷಕರನ್ನು ಗುಲಾಮರನ್ನಾಗಿ ನೋಡಿಕೊಳ್ಳಲಾಗುತ್ತಿದೆ ಸರ್ಕಾರ ಇವರ ಸಂಕಷ್ಟಗಳನ್ನ ನೋಡುತ್ತಿಲ್ಲ ಮತ್ತು ಸ್ಪಂದಿಸುತ್ತಿಲ್ಲ. ಇವತ್ತು ಕಾರ್ಮಿಕ ವರ್ಗ, ಶಿಕ್ಷಕ ವರ್ಗ, ಮತ್ತು ವಿದ್ಯಾರ್ಥಿಗಳು ಬೀದಿಯಲ್ಲಿ ನಿಂತು ಹೋರಾಟ ಮಾಡುವ ಪರಿಸ್ಥಿತಿ ಈ ಸರ್ಕಾರದ ದುರ್ಬಲ ಆಡಳಿತದ ನಿದರ್ಶನವಾಗಿದೆ. ಇವತ್ತು ಅತಿಥಿ ಶಿಕ್ಷಕರೊಂದಿಗೆ ಕೈ ಜೋಡಿಸದೆ ಪಾಠ ಮಾಡುವ ಸರ್ಕಾರಿ ಶಿಕ್ಷಕರು ಎನ್ ಇ ಪಿ 2020 ರ ಹೊಸ ಕರಾಳ ನೀತಿಯಿಂದ ಬೀದಿಗೆ ಬಂದು ಹೋರಾಟ ಮಾಡುವ ದಿನಗಳು ದೂರವಿಲ್ಲ. ಸರ್ಕಾರ ಶೀಘ್ರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡ ಸಂಶುದ್ದೀನ್ ಆಗ್ರಹಿಸಿದರು.

ಧರಣಿಯಲ್ಲಿ ಅತಿಥಿ ಶಿಕ್ಷಕ ಸಂಘದ ಕಾರ್ಯದರ್ಶಿ ಚಿತ್ರಕಲಾ ಮತ್ತು ಪದಾಧಿಕಾರಿಗಳು, ಕ್ಯಾಂಪಸ್ ಫ್ರಂಟ್ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶ್ರಫ್ ಪೊರ್ಕೊಡಿ ಹಾಗೂ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.

Join Whatsapp
Exit mobile version