Home ಟಾಪ್ ಸುದ್ದಿಗಳು ನೀಟ್‌ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನೀಟ್‌ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನವದೆಹಲಿ: ಸೆಪ್ಟೆಂಬರ್ 12 ಕ್ಕೆ ನಿಗದಿಯಾಗಿದ್ದ ನೀಟ್ ಪರೀಕ್ಷೆಯನ್ನು ಮುಂದೂಡಲು ಸಾಧ್ಯವಿಲ್ಲವೆಂದು ಇಂದು ಸುಪ್ರೀಮ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಿ.ಬಿ.ಎಸ್.ಸಿ ಮತ್ತು ನೀಟ್ ಪರೀಕ್ಷೆಯಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಇಂದು ಸುಪ್ರೀಮ್ ಕೋರ್ಟ್ ತಿರಸ್ಕರಿಸಿ ಅದೇಶ ನೀಡಿದೆ.

ನ್ಯಾಯಾಲಯದ ಈ ಆದೇಶದ ಹಿನ್ನೆಲೆಯಲ್ಲಿ ನೀಟ್ ಮತ್ತು ಸಿ.ಬಿ.ಎಸ್.ಸಿ ಪರೀಕ್ಷೆಗಳನ್ನು ಏಕಕಾಲದಲ್ಲಿ ಬರೆಯುವ ಅನಿವಾರ್ಯತೆಗೆ ವಿದ್ಯಾರ್ಥಿಗಳು ಸಿಲುಕಿದ್ದಾರೆ.

Join Whatsapp
Exit mobile version