ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಸಂದರ್ಶನವನ್ನು ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಸುದ್ದಿವಾಹಿನಿಯನ್ನು ಕೆನಡಾ ನಿಷೇಧಿಸಿದೆ.
ಸಂದರ್ಶನದಲ್ಲಿ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಕುರಿತು ಜೈಶಂಕರ್ ಪ್ರತಿಕ್ರಿಯಿಸಿದ್ದರು. ಈ ಪತ್ರಿಕಾಗೋಷ್ಠಿಯನ್ನು ಆಸ್ಟ್ರೇಲಿಯಾ ಟುಡೆ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿತ್ತು.
ಕೆನಡಾದಲ್ಲಿ ಭಾರತ ವಿರೋಧಿ ಶಕ್ತಿಗಳಿಗೆ ರಾಜಕೀಯವಾಗಿ ಅವಕಾಶ ನೀಡಲಾಗುತ್ತಿದೆ ಎಂದು ಒತ್ತಿ ಹೇಳಿದ್ದರು. ಸಚಿವರು ಕೆನಡಾವನ್ನು ಟೀಕಿಸಿದ್ದರಿಂದ ಆಸ್ಟ್ರೇಲಿಯಾ ಟುಡೇ ಚಾನೆಲ್ ಅನ್ನು ನಿರ್ಬಂಧಿಸಲಾಗಿದೆ. ಕೆನಡಾದಲ್ಲಿ ಹಿಂದೂ ದೇಗುಲಗಳ ಮೇಲೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಅಧಿಕಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನ ಎಂದು ಕರೆದಿದ್ದಾರೆ.
ಭಾರತವು ಈ ವಿಷಯದ ಬಗ್ಗೆ ಬಲವಾದ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿತು, ಔಟ್ಲೆಟ್ ಅನ್ನು ನಿಷೇಧಿಸುವ ಕೆನಡಾದ ಕ್ರಮವು ಆಶ್ಚರ್ಯಕರವಾಗಿದೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕೆನಡಾದ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಒತ್ತಿ ಹೇಳಿದರು.