ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲೇ ಉಳಿದ ನಿಯೋಗ

Prasthutha|

ಹೊಸದಿಲ್ಲಿ: ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನ ಸರಿಯಾಗುವವರೆಗೆ ದೆಹಲಿಯಲ್ಲೇ ಕೆನಡಾ ನಿಯೋಗ ಉಳಿದುಕೊಳ್ಳಲಿದೆ. ಸ್ಥಳದಲ್ಲಿರುವ ಇಂಜಿನಿಯರಿಂಗ್ ತಂಡದಿಂದ ದೋಷ ಸರಿಪಡಿಸಲು ಯತ್ನಿಸಲಾಗುತ್ತಿದೆ ಎಂದು ಎಎನ್​ಐ ಸುದ್ದಿಸಂಸ್ಥೆಗೆ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ. ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದ ಕೆನಡಾ ಪ್ರಧಾನಿ ಇಂದು ರಾತ್ರಿ 8 ಗಂಟೆಗೆ ವಾಪಸ್​ ಹೊರಡುವ ವೇಳೆ ತಾಂತ್ರಿಕ ದೋಷ ಕಂಡುಬಂದಿದೆ.

- Advertisement -

ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಕೆನಡಾಕೆ ಪ್ರಯಾಣಿಸಬೇಕಿದ್ದ ಸಿಎಫ್ಸಿ 001 ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆಗಳಿಂದ ತಿಳಿದುಬಂದಿದೆ. ಈ ಸಮಸ್ಯೆಗಳನ್ನು ರಾತ್ರೋರಾತ್ರಿ ಪರಿಹರಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆಗಳನ್ನು ಮಾಡುವವರೆಗೆ ನಮ್ಮ ನಿಯೋಗವು ಭಾರತದಲ್ಲಿಯೇ ಉಳಿಯುತ್ತದೆ ಎಂದು ಕೆನಡಾದ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬರುವುದಕ್ಕೂ ಮುನ್ನ ಪ್ರಧಾನಿ ಟ್ರುಡೊ ಅವರು ಜಿ 20 ಶೃಂಗಸಭೆಯ ಹೊರತಾಗಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

Join Whatsapp