Home ಟಾಪ್ ಸುದ್ದಿಗಳು ಬೈಕ್ ಮೇಲೆ ಮರ ಬಿದ್ದು ಕೆನರಾ ಬ್ಯಾಂಕ್ ಉದ್ಯೋಗಿ ಸಾವು

ಬೈಕ್ ಮೇಲೆ ಮರ ಬಿದ್ದು ಕೆನರಾ ಬ್ಯಾಂಕ್ ಉದ್ಯೋಗಿ ಸಾವು

ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.


ರಾಮನಗರ ತಾಲೂಕಿನ ಅಕ್ಕೂರು ಗ್ರಾಮದ ಕೆನರಾ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ (29) ಮೃತ ದುರ್ದೈವಿ.
ಅಕ್ಕೂರು ಗ್ರಾಮದಿಂದ ಕೆಲಸ ಮುಗಿಸಿಕೊಂಡು ರಾತ್ರಿ ರಾಮನಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದಾಗ ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದು ಗಂಭೀರ ಗಾಯಗೊಂಡ ಕಿರಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ವಿಜಯವಾಡ ಮೂಲದ ಕಿರಣ್, ರಾಮನಗರದಲ್ಲಿ ಪತ್ನಿ ಮತ್ತು ಮಗು ಜತೆ ವಾಸವಿದ್ದರು.


ರಾಮನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version