ಬಿಜೆಪಿ ಅವಧಿಯಲ್ಲಿನ ನಿಗಮ, ಮಂಡಳಿ ಪದಾಧಿಕಾರಿಗಳ ನೇಮಕಾತಿ ರದ್ದು

Prasthutha|

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ಅವಧಿಯಲ್ಲಿ ನೇಮಕಾತಿಯಾಗಿದ್ದ ನಿಗಮ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ನಿರ್ದೇಶಕರ ನೇಮಕಾತಿಯನ್ನು ರದ್ದು ಮಾಡಲಾಗಿದೆ.

- Advertisement -


ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಆದೇಶ ಹೊರಡಿಸಿರುವ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಾತಿಗೊಂಡಿದ್ದ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರ ಸರ್ಕಾರಿ, ಅರೆ ಸರ್ಕಾರಿ, ಇತರೆ ಎಲ್ಲಾ ಅಧ್ಯಕ್ಷರು, ನಿರ್ದೇಶಕರು ಹಾಗೂ ನಾಮ ನಿರ್ದೇಶನ ಸದಸ್ಯರುಗಳನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ ಎಂದಿದ್ದಾರೆ.

Join Whatsapp