ಲಿಂಗಪತ್ತೆ ಪರೀಕ್ಷೆ ಮಾಡಿದರೆ ಆಸ್ಪತ್ರೆಯ ಮಾನ್ಯತೆ ರದ್ದು: ಡಾ.ಕೆ.ಸುಧಾಕರ್

Prasthutha|

ಬೆಂಗಳೂರು: ರಾಜ್ಯದಲ್ಲಿ ಲಿಂಗಪತ್ತೆ ಪರೀಕ್ಷೆ ಮಾಡಿದರೆ ಅಂತಹ ಆಸ್ಪತ್ರೆಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಹಿನ್ನೆಲೆಯಲ್ಲಿ ಲಿಂತ ಸಮಾನತೆ ಅತ್ಯಂತ ಮುಖ್ಯವಾಗಿದೆ. 2001ರಲ್ಲಿ ಒಂದು ಸಾವಿರ ಪುರುಷರಿಗೆ 946 ಮಹಿಳೆಯರಿದ್ದು, 2018ರ ವೇಳೆಗೆ ಇದು 957ಕ್ಕೆ ಏರಿಕೆಯಾಗಿದೆ. ಭ್ರೂಣ ಪತ್ತೆ, ಭೂಣ ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಪ್ರತಿ ವರ್ಷ ಜನವರಿ 24ರಂದು ಈ ದಿನವನ್ನು ಆಚರಿಸಲಾಗುತ್ತದೆ. ದೇಶದ ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಒದಗಿಸುವ ಉದ್ದೇಶದೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ. ಅಲ್ಲದೆ ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಅವರ ಶಿಕ್ಷಣದ ಪ್ರಾಮುಖ್ಯತೆ, ಆರೋಗ್ಯ ಮತ್ತು ಪೌಷ್ಠಿಕತೆ ಕುರಿತು ಅರಿವು ಮೂಡಿಸುವುದೂ ಈ ದಿನದ ಉದ್ದೇಶವಾಗಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಈ ಕುರಿತು ಟ್ವೀಟ್ ಮಾಡಿದ್ದು, ಹೆಣ್ಣುಮಗು ತಾಯಿಯಾಗಿ, ಸಹೋದರಿಯಾಗಿ, ಹೆಂಡತಿಯಾಗಿ ಜೀವನದ ಎಲ್ಲ ಹಂತಗಳಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp