ಮುಂಬೈ: ನಿಯಮ ಉಲ್ಲಂಘನೆ ಮಾಡಿರುವ ಆರು ಕೆಮ್ಮಿನ ಸಿರಪ್ ತಯಾರಕ ಕಂಪನಿಗಳ ಪರವಾನಿಗೆಯನ್ನು ರದ್ದು ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.
ಉತ್ತರ ಪ್ರದೇಶದ ನೋಯ್ಡಾ ಮೂಲದ ಸಂಸ್ಥೆ ತಯಾರಿಸಿದ್ದ ಕೆಮ್ಮಿನ ಸಿರಪ್’ನಿಂದ ಕಳೆದ ವರ್ಷ ಉಜ್ಬೇಕಿಸ್ತಾನದ 18 ಮಕ್ಕಳು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿತ್ತು ಎಂದು ಆಹಾರ ಮತ್ತು ಔಷಧ ಆಡಳಿತ ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.
ಅಲ್ಲದೆ ನಿಯಮ ಉಲ್ಲಂಘಿಸಿರುವ 17 ಸಂಸ್ಥೆಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದಿದ್ದಾರೆ.